22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ನಡೆಯುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೯:೩೦ ರಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆಯಲಿದೆ.


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ. ವಿವಿಧ ವಿ.ವಿ. ಗಳ ಮುಖ್ಯಸ್ಥರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿದ್ವಾಂಸರಿAದ ವಿಚಾರ ಸಂಕಿರಣ ನಡೆಯಲಿದೆ.


ಇದೇ ವೇಳೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಡಲಿದ್ದಾರೆ.


ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ, ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ವಿಚಾರ ಸಂಕಿರಣದ ಪ್ರಧಾನ ಸಂಯೋಜಕ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
error: Content is protected !!