32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಜ.6ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ ಸುಪ್ರೀಂ ಮುಂದಿನ ವಿಚಾರಣೆಯನ್ನು ಮಾರ್ಚ್‌ 23 ಕ್ಕೆ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನೆ ಮಾಡಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಜಸ್ಟೀಸ್‌ ಸಂಜಯ್‌ ಕುಮಾರ್‌ ಪೀಠದ ಮುಂದೆ ನಡೆಯಿತು.

ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್‌ ರಾವ್‌ ಅವರನ್ನು ಸೆಷನ್ಸ್‌ ನ್ಯಾಯಾಲಯ ಹಾಗೂ ನಂತರ ಸಿಬಿಐ ನ್ಯಾಯಾಲಯವು ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನೆ ಮಾಡಿ ಪ್ರಕರಣದ ಮರು ತನಿಖೆಗೆ ಆಗ್ರಹ ಮಾಡಿ ಸೌಜನ್ಯ ತಾಯಿ ಕುಸುಮಾವತಿ ಗೌಡ ಅವರು ಮೊದಲು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ಹೈಕೋರ್ಟ್‌ ದ್ವಿಸದಸ್ಯ ಪೀಠ ವಜಾ ಮಾಡಿತ್ತು. ಈ ಹೈ ಕೋರ್ಟ್‌ ಆದೇಶವನ್ನು ಪ್ರಶ್ನೆ ಮಾಡಿ ವಿಶೇಷ ಅನುಮತಿ ಮೇಲ್ಮನವಿ ಅರ್ಜಿ ಸಲ್ಲಿಸುವ ಮೂಲಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಮೇಲ್ಮನವಿ ಅರ್ಜಿಯಲ್ಲಿ ಕೆಲವು ತಾಂತ್ರಿಕ ದೋಷಗಳಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಅದನ್ನು ಡಿಫೆಕ್ಟ್‌ ಲಿಸ್ಟ್‌ನಲ್ಲಿ ಸೇರಿಸಿತ್ತು. ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಲು ಅರ್ಜಿದಾರರ ಪರ ವಕೀಲರಿಗೆ 90 ದಿನಗಳ ಕಾಲಾವಕಾಶ ನೀಡಿತ್ತು. ದೋಷಗಳನ್ನು ಸರಿಪಡಿಸಿ ಕುಸುಮಾವತಿ ಗೌಡ ಅವರ ಪರ ವಕೀಲರು 2025 ರ ನವೆಂಬರ್‌ 19 ರಂದು ಅರ್ಜಿಯನ್ನು ಮರುಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮಾರ್ಚ್‌ 23ಕ್ಕೆ ಮುಂದೂಡಿಕೆ ಮಾಡಿದೆ.

Related posts

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!