24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ಟೈಟಲನ್ನು ಕರುನಾಡ ಚಕ್ರವರ್ತಿ ಡಾ॥ ಶಿವರಾಜ್ ಕುಮಾರ್ ರವರು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು.

ಗ್ರಾಮೀಣ ಬದುಕಿನ ಸೊಗಡು, ಹಾಸ್ಯ, ಭಾವನೆ ಮತ್ತು ಸಮಾಜದ ನೈಜ ಮುಖವನ್ನು ಒಳಗೊಂಡ ಕಥಾವಸ್ತುವನ್ನು ಹೊಂದಿದೆ. ಸಂಪೂರ್ಣ ಜವಾರಿ ಭಾಷೆಯಲ್ಲಿ ಮೂಡಿ ಬಂದಿರುವ ಚಿತ್ರ ಯುವ ಮತ್ತು ಅನುಭವಿ ಕಲಾವಿದರನ್ನ ಒಳಗೊಂಡಿದೆ.

ಕೆ.ರತ್ನಾಕರ ಕಾಮತ್ ಮತ್ತು ಗಣೇಶ್ ಆರ್ ಕಾಮತ್ ಕೆ ನಿರ್ಮಾಣದಲ್ಲಿ, ಕಾಮಿಡಿ ಕಿಲಾಡಿ ಖ್ಯಾತಿಯ ಜಿ.ಜಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು ‘ದಸ್ಕತ್’ ಸಿನಿಮಾ ನಿರ್ದೇಶಿಸಿದ ಯುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಸಂತೋಷ್ ಗುಂಪಲಾಜೆ ಮತ್ತು ದೀಕ್ಷಿತ್ ಧರ್ಮಸ್ಥಳ ಛಾಯಗ್ರಹಣವಿದ್ದು,‌ ಚಿತ್ರಕ್ಕೆ ಕಿಶೋರ್ ಶೆಟ್ಟಿ ಸಂಗೀತವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಸೌಮ್ಯ ಡಿ ಗೌಡ ಮತ್ತು ಕ್ರಿಯೇಟಿವ್ ಹೆಡ್ ಆಗಿ ಸ್ಮಿತೇಶ್ ಎಸ್ ಬಾರ್ಯ ಕೆಲಸ ಮಾಡಿದ್ದು ತಂಡದಲ್ಲಿ ಚಿದಾನಂದ ಪೈ, ನಿಶಿತ್ ಶೆಟ್ಟಿ, ಮನೋಜ್ ಆನಂದ್ ,ನೀರಜ್ ಕುಂಜರ್ಪ ಮತ್ತು ಅನೂಪ್ ಭಟ್ ಸಹಕರಿಸಿದ್ದಾರೆ.

ಹಿರಿಯ ಕಲಾವಿದರಾದ ಬಿರಾದರ್, ಮಿಮಿಕ್ರಿ ಗೋಪಿ, ಪ್ರಿಯಾ ಸವದಿ, ಸೂರಜ್,ಮಲ್ಯ ಬಾಗಲಕೋಟೆ, ಸಂತೋಷ್ ರೋಣ,ಕಾಮಿಡಿ‌ ಕಿಲಾಡಿ ಖ್ಯಾತಿಯ ಜಿ.ಜಿ, ಉಮೇಶ್ ಕಿನ್ನಾಳ್ ದಾನಪ್ಪ, ಸದಾನಂದ ಹೀಗೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ.

ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರವಾಗಿದ್ದು ,ದೃಶ್ಯ ವೈಭವ, ನೈಜ ಸಂಭಾಷಣೆಗಳು ಪ್ರೇಕ್ಷಕರನ್ನು ತಮ್ಮದೇ ಲೋಕಕ್ಕೆ ಕರೆದುಕೊಂಡು ಹೋಗಲಿವೆ. ಕಥೆಯ ಹರಿವು ಎಲ್ಲ ವರ್ಗದ ಪ್ರೇಕ್ಷಕರಿಗೂ ಸಂಪರ್ಕ ಸಾಧಿಸುವಂತೆ ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಕುಟುಂಬ ಸಮೇತರಾಗಿ ನೋಡಬಹುದಾದ ಸಂಪೂರ್ಣ ಮನರಂಜನಾ ಚಿತ್ರವಾಗಲಿದ್ದು ಶೀಘ್ರದಲ್ಲೇ ಚಿತ್ರ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ಮಾಣ ತಂಡ ತಿಳಿಸಿದೆ.

Related posts

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!