September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಇಲ್ಲಿ ಅತ್ಯಂತ ಸಡಗರದಿಂದ ನಡೆಯಿತು.

ಎಸ್ ಡಿ ಎಮ್. ಸಿ ಯ ಅಧ್ಯಕ್ಷರು ಹಾಗೂ ಕಳಿಯ ಗ್ರಾಮ ಪಂಚಾಯತ್ ಇದರ ಸದಸ್ಯ ಹರೀಶ್ ಕುಮಾರ್ ಬಿ. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನಾ ನೆರವೇರಿಸಿ ಮಕ್ಕಳಿಗೆ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಬಸವಲಿಂಗಪ್ಟ ಟಿ. ಬಿ . ಉಪಸ್ಥಿತರಿದ್ದು ಕಾರ್ಯಕ್ರಮ ವೀಕ್ಷಿಸಿ ಪ್ರಶಂಸಿದರು.


ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಸಿಆರ್ ಪಿ. ರಾಜೇಶ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಎಸ್. ಡಿ . ಎಂ . ಸಿ . ಯ ಸದಸ್ಯರುಗಳಾದ ಯೋಗೀಶ್, ರಹಿಮಾನ್ , ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಲಸ್ಟರನ 13 ಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲ್ಗೊಂಡು, ಭಾಗವಹಿಸಿದ ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪದವೀಧರ ಶಿಕ್ಷಕರಾದ ಕೃಷ್ಣ ಪ್ರಸಾದ ಸ್ವಾಗತಿಸಿ, ಮಹಾಂತೇಶ್ ಜಿ. ಕೆ. ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಸಹಕಾರ ನೀಡಿದರು. ಮುಖ್ಯೋಪಾದ್ಯಾಯರಾದ ಶ್ರೀಮತಿ ಶಾಂತಾ ಎಸ್ ಧನ್ಯವಾದವಿತ್ತರು.
.

Related posts

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
error: Content is protected !!