22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

ಬೆಳ್ತಂಗಡಿ: ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171 ನೇ ವರ್ಷದ ಗುರು ಜಯಂತಿ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಾರಾವಿ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಜ.11 ರಂದು ನಡೆಯಲಿದೆ.


ಜ.11 ರಂದು ಭಜನೆ, ಗುರು ಪೂಜೆ, ಸಹಿತ ವೈದಿಕ ಕಾರ್ಯಕ್ರಮಗಳು ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ್ ನೇತೃತ್ವದಲ್ಲಿ ನಡೆಯಲಿದೆ.


ಧಾರ್ಮಿಕ ಸಭೆ: ಬೆಂಗಳೂರು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಗುರುಪೀಠ ಉದ್ಘಾಟಿಸಿ ಆರ್ಶೀವಚನ ನೀಡಲಿರುವರು. ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭಜನಾ ಮಂದಿರ ಉದ್ಘಾಟಿಸುವರು. ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ ಹಾಗೂ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ದೀಪ ಪ್ರಜ್ವಲನೆ ಮಾಡಲಿರುವರು. ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಸತ್ಯಜಿತ್ ಸುರತ್ಕಲ್, ಶಾಸಕರಾದ ಸುನೀಲ್ ಕುಮಾರ್, ಉಮಾನಾಥ ಕೋಟ್ಯಾನ್, ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ಪ್ರತಿಭಾ ಕುಳಾಯಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಊರವರು ಉಪಸ್ಥಿತರಿದ್ದರು.
ಸಾಮಾಜಿಕ ಕ್ಷೇತ್ರದಲ್ಲಿ ಸತೀಶ್ ಕೆ.ಕಾಶಿಪಟ್ಣ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ದೀಕ್ಷಿತಾ ಯೋಗೀಶ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರತೀಕ್ಷಾ ನಾರಾವಿ ಅವರನ್ನು ಸನ್ಮಾನಿಸಲಾಗುವುದು ಎಂದು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಯ ಪೂಜಾರಿ ತಿಳಿಸಿದ್ದಾರೆ.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!