23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಹೈಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಕ್ರು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಗೌರವಾನ್ವಿತ ಏಚ್ ಟಿ ನರೇಂದ್ರ ಪ್ರಸಾದ್, ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ಕರ್ನಾಟಕ ಸರ್ಕಾರದ ಗೌರವಾನ್ವಿತ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ರವರುಗಳನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಯ ವಿಚಾರದಲ್ಲಿ ಮಾತುಕತೆ ನಡೆಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರಿಗೆ ಜೊತೆಯಾದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆರವರಿಗೆ ಸಂಘದ ಪರವಾಗಿ ಧನ್ಯವಾದ ತಿಳಿಸಿದರು.

Related posts

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
error: Content is protected !!