22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ಜ.9ರಂದು ನಡೆದಿದೆ.

ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸವಾರರು ಭಯಭೀತರಾಗಿದ್ದರು.

ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಿದ ಸ್ಥಿತಿ ನಿರ್ಮಾಣವಾಗಿತ್ತು.ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿರುವುದರಿಂದ, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

Related posts

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!