ಮಡಂತ್ಯಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ಹಿಂದೂ ಸಂಗಮ ತಾಲೂಕು ಆಯೋಜನಾ ಸಮಿತಿ ಕಾರ್ಯದರ್ಶಿ ವಸಂತ ಮರಕಡ, ಮಡಂತ್ಯಾರು ಮಂಡಲ ನಿರ್ವಹಣಾ ಸಮಿತಿಯ ಸಂಯೋಜಕ ಶ್ರೀಕಾಂತ್ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಹಟತ್ತೋಡಿ, ಪ್ರಮುಖರಾದ ಪ್ರಭಾಕರ ಮುದಲಡ್ಕ, ಚಂದ್ರಕಾಂತ ನಿಡ್ಡಾಜೆ, ನಾರಾಯಣ ಶೆಟ್ಟಿ ಹಾಗೂ ಇತರರು ಭಾಗವಹಿಸಿದ್ದರು.











