25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ಹಾಗೂ ABRSM ಇವರು ಜನವರಿ 12ರಂದು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ “ಅಬ್ಬಕ್ಕ @ 500 ಪ್ರೇರಣಾದಾಯಿ ಉಪನ್ಯಾಸ” ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಇವರಿಗೆ “ರಾಣಿ ಅಬ್ಬಕ್ಕ’ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇವರ ಅಪೂರ್ವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಕಾರ್ಯಕ್ರಮವನ್ನು ವೀರರಾಣಿ ಅಬ್ಬಕ್ಕಳ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್ ಧರ್ಮಸ್ಥಳ ಇವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರವಿ ಅಲೆವೂರಾಯ, ಯಕ್ಷಗಾನ ಗುರುಗಳು ಮತ್ತು ಮುಖ್ಯ ಶಿಕ್ಷಕರು ನವಭಾರತ ರಾತ್ರಿ ಪ್ರೌಢಶಾಲೆ, ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಇದರ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ.ಮಾಧವ ಎಂ ಕೆ ಇವರು ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ “ರಾಣಿ ಅಬ್ಬಕ್ಕ” ಕುರಿತಾಗಿ ಇದುವರೆಗೆ ಗಮನಾರ್ಹವಾಗಿ ಸೇವೆ ಸಲ್ಲಿಸಿದ “ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ, ಬಂಟ್ವಾಳ” ಇದರ ಅಧ್ಯಕ್ಷರಾದ ಡಾ.ಎಂ ತುಕಾರಾಂ ಪೂಜಾರಿ, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಳ್ಳಾಲ’ ಇದರ ಅಧ್ಯಕ್ಷರಾದ ದಿನಕರ್ ಉಳ್ಳಾಲ್, “ಯಕ್ಷಾಂಗಣ ಮಂಗಳೂರು” ಇದರ ಕಾರ್ಯಧ್ಯಕ್ಷರಾದ ಭಾಸ್ಕರ್ ರೈ ಕುಕ್ಕುವಳ್ಳಿ, ಅಮರ್‌ಕೋಟೆ ಸಂಸ್ಥಾಪಕರು, “ನವನೆರ್‌ಬೆದ್ರ ಫೌಂಡೇಶನ್(ರಿ)”, ಡಾ. ಯು.ಕೆ ಯಾದವ ಸಸಿಹಿತ್ತು ವಿಶ್ರಾಂತ ಪ್ರಾಂಶುಪಾಲರು, ಸಂಶೋಧಕರು ಮತ್ತು ಸಾಹಿತಿಗಳು, ಉಡುಪಿ ಇವರುಗಳನ್ನು ಗೌರವಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya
error: Content is protected !!