September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

ಬೆಳ್ತಂಗಡಿ : ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಅಕಸ್ಮಿಕ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ KA-13-AA-4758 ನಂಬರಿನ ಲಾರಿ ಜ.9 ರಂದು ಮಧ್ಯರಾತ್ರಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಅಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ. ಈ ಹೊಸ ಲಾರಿ ಮಾಲೀಕರಿಗೆ ಬಂದು 40 ದಿನವಾಗಿದೆ ಅಷ್ಟೇ.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಯವಕರು ಬೆಳ್ತಂಗಡಿ ಅಗ್ನಿಶಾಮಕ ದಳ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು‌. ಸ್ಥಳಕ್ಕೆ ಆಗಮಿಸಿ ಲಾರಿ ನಂದಿಸಲು ಸಹಕಾರಿಸಿದ್ದಾರೆ. ಬಳಿಕ ಸುಗಮ ಸಂಚಾರಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡರು. ಲಾರಿ ಬೆಂಕಿಗಾಹುತಿಯಾದ ವಿಡಿಯೋಗಳು ವೈರಲ್ ಅಗಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!