September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಉರೂಸ್ ಸಂದರ್ಭದಲ್ಲಿ ನಾಡಿನುದ್ದಗಲದಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿರುವುದರಿಂದ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನಿಗದಿಪಡಿಸಿದ ಪಾಕಿಂಗ್ ಸ್ಥಳಗಳಲ್ಲೇ ವಾಹನಗಳನ್ನು ನಿಲ್ಲಿಸುವುದು, ರಸ್ತೆ ಬದಿಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದು, ಆಯ್ದ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು, ಉರೂಸ್ ನಡೆಯುವ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಇಲಾಖೆಯು ನಿರಂತರ ನಿಗಾ ಇರಿಸಲಿದೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸಂದೇಶಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವುದು, ದರ್ಗಾ ಸಮಿತಿಯು ನೇಮಿಸುವ ಸ್ವಯಂಸೇವಕರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಜನದಟ್ಟಣೆಯನ್ನು ನಿಯಂತ್ರಿಸಲು ಸಹಕರಿಸುವುದು, ಕಾರ್ಯಕ್ರಮದ ವೇಳೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಸಿಬ್ಬಂದಿಗೆ ಅಥವಾ ಸಹಾಯವಾಣಿಗೆ ಮಾಹಿತಿ ನೀಡಬೇಕು ಇವೇ ಮೊದಲಾದ ಅಂಶಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ, ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ ಹಾಗೂ ಸಂಬಂಧಿಸಿದ ಅಧಿಕಾರಿಗಳು, “ಉರೂಸ್ ಎನ್ನುವುದು ಸೌಹಾರ್ದತೆಯ ಪ್ರತೀಕ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಕಾನೂನು ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಶಾಂತಿ ಸಭೆಯಲ್ಲಿ ದರ್ಗಾ ಸಮಿತಿಯ ಪದಾಧಿಕಾರಿಗಳು, ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪ್ರತಿನಿಧಿಗಳು, ಸರ್ವಧರ್ಮಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

Related posts

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!