22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ಸಭಾಂಗಣ ಜ.11ರಂದು ಜರುಗಲಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.

ಈ ವಿಶೇಷ ಕಾರ್ಯಾಗಾರದಲ್ಲಿ 10ನೇ ತರಗತಿ ಪರೀಕ್ಷೆಯಲ್ಲಿ ಟಾಪರ್ ಆಗಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, 10ನೇ ತರಗತಿ ನಂತರದ ಶೈಕ್ಷಣಿಕ ಅವಕಾಶಗಳ ಬಗ್ಗೆ ವಿಸ್ತ್ರತ ಮಾಹಿತಿ, ಪರೀಕ್ಷಾ ಸಮಯದಲ್ಲಿ ಮಕ್ಕಳ ದಿನಚರಿ ಮತ್ತು ಪಾಲಕರ ಕರ್ತವ್ಯಗಳ ಬಗ್ಗೆ ಮಾಹಿತಿ, ಮಾದರಿ ಪ್ರಶ್ನೆ ಪತ್ರಿಕೆಗಳ ಕಿರಿ ಹೊತ್ತಿಗೆಯ ವಿತರಣೆ, ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಯಲಿರುತ್ತದೆ.

ಮುಖ್ಯ ಅತಿಥಿಗಳಾಗಿ ಯುವ ಸಾಧಕ, ತರಭೇತಿದಾರ ಸ್ಮಿತೇಶ್ ಬಾರ್ಯ ಭಾಗವಹಿಸಲಿದ್ದಾರೆ ಎಂದರು. ವಿಶೇಷ ಸೂಚನೆ: ಬೆಳ್ತಂಗಡಿ, ಮುಂಡಾಜೆ, ಉಜಿರೆ,ಕನ್ಯಾಡಿ, ಬೆಳ್ತಂಗಡಿ, ಪುಂಜಾಲಕಟ್ಟೆ, ಮತ್ತು ಬಿಸಿರೋಡ್ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಮಧ್ಯಾಹ್ನದ ಊಟ ಹಾಗೂ ಸಂಜೆಯ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya
error: Content is protected !!