ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿಯವರ ಜೊತೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ರೌಂಡ್‌ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರ ದಾಳಿ ವೇಳೆ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಓಡಿ ಹೋಗಿದ್ದು, ಹಿಟಾಚಿ ಅಪರೇಟರ್ ನನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ಚಾರ್ಮಡಿಯ ಮಹಮ್ಮದ್ ಶಮೀರುದ್ದಿನ್ ಎಂಬುದಾಗಿ ಹಾಗೂ ಓಡಿ ಹೋದ ಟಿಪ್ಪರ್ ಚಾಲಕ ನ ಹೆಸರು ಚಾರ್ಮಾಡಿಯ ಹೆಚ್.ಹನೀಫ್ ಎಂಬುದಾಗಿ ತಿಳಿಸಿದ್ದಾನೆ.

ಅಕ್ರಮವಾಗಿ ಮರಳು ತುಂಬಿದ್ದ 3,50,000 ಮೌಲ್ಯದ ಟಿಪ್ಪರ್ KA-41-C-0557 ಮತ್ತು 2,50,000 ಮೌಲ್ಯದ
DOOSAN HITACHI- 150 ವಶಪಡಿಸಿಕೊಂಡು.ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದ ಚಾರ್ಮಾಡಿ ನಿವಾಸಿಗಳಾದ ಮಹಮ್ಮದ್ ಶಮೀರುದ್ದಿನ್ ಮತ್ತು ಹೆಚ್.ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2023(u/s303(2),3,(5)) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪೂರ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ತಂಡದ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!