ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ ” ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಹೇಳಿರುವ ವಿವೇಕಾನಂದರು ಯುವ ಜನತೆ ತಮ್ಮ ಜೀವನಕ್ಕೆ ಸ್ಪಷ್ಟ ಗುರಿಯನ್ನು ಹೊಂದಿ ಶಿಸ್ತುಬದ್ಧವಾಗಿ ಬದುಕಬೇಕು ಎಂಬ ಸಂದೇಶ ಕೊಟ್ಟವರು. ಆದುದರಿಂದ ಯುವ ಜನತೆಗೆ ವಿವೇಕಾನಂದರು ಸ್ಫೂರ್ತಿಯಾಗಿದ್ದಾರೆ ” ಎಂದು ಹೇಳಿದರು.
ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ, ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗ, ಎನ್ ಎಸ್ ಎಸ್ ಸ್ವಯಂ ಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.











