ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ ವೈದ್ಯಕೀಯ ಅಧಿಕಾರಿ ಡಾ. ಯೋಹಿ ಧರ್ಮರಾಜನ್ ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಗುರಿ ತಲುಪುವ ಮಾರ್ಗ ಹಾಗೂ ಅರೋಗ್ಯವನ್ನು ಉತ್ತಮಗೊಳಿಸುವ ವಿಧಾನಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನೃತ್ಯ, ಸಮೂಹ ಗಾಯನ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪೂರ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಧೃತಿ ನಿರೂಪಿಸಿದರು.

Related posts

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya
error: Content is protected !!