37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಕಣಿಯೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಕಣಿಯೂರು ಗ್ರಾಮ ಪಂಚಾಯತ್ ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ಕಟ್ಟಡವನ್ನು ಶಾಸಕ ಹರೀಶ್ ಪೂಂಜ ಜ.12 ರಂದು ಲೋಕಾರ್ಪಣೆ ಗೊಳಿಸಿದರು.

ಬಳಿಕ ಕಣಿಯೂರು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಸಮೃದ್ಧ ಕಣಿಯೂರಿನ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ. ತಾಲೂಕು ಕಚೇರಿಗೆ ಸರಿಸಾಟಿಯಾಗಿ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣಗೊಂಡಿದ್ದು ಜನರ ಸೇವೆಗೆ ಅನುಕೂಲವಾಗಲಿದೆ. ಗ್ರಾಮದ ಹೃದಯ ಭಾಗದಲ್ಲಿ ಉತ್ತಮ ರೀತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಭಾಭವನ 40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮುಂದೆ ಇದರ ಅಭಿವೃದ್ಧಿಗಾಗಿ ಸಚಿವರಲ್ಲಿ ಮನವಿ ಸಲ್ಲಿಸಲಾಗುವುದು. ಮಕ್ಕಳ ಉಜ್ವಲ ಭವಿಷ್ಯಕ್ಕೆ ರೂ.16 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿದ್ದು, ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊಟ್ಯಾಂತರ ರೂಪಾಯಿಗಳ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದು ಶಾಸಕರು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಪದ್ಮುಂಜ ಪ್ಯಾಕ್ಸ್ ಅಧ್ಯಕ್ಷ ರಕ್ಷಿತ್ ಶೆಟ್ಟಿ ಪಣೆಕ್ಕರ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಉಪಾಧ್ಯಕ್ಷ ಸುನೀಲ್ ಅಣಾವು, ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಸಿಡಿಪಿಒ ಪ್ರಿಯಾ ಆಗ್ನೇಸ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜನಾರ್ದನ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ, ಯಶವಂತ್ ಎನ್, ಪ್ರವೀಣ್ ಗೌಡ, ಸುಮತಿ, ಯಶೋಧಾ, ಜಲಜಾಕ್ಷಿ, ಸೇಸಪ್ಪ, ಕೃಷ್ಣಪ್ರಸಾದ್, ಗಾಯತ್ರಿ, ಉಮಾವಾತಿ, ಸುಮತಿ ಶೆಟ್ಟಿ, ರಾಜೇಶ್ ಎನ್, ಯಶೋಧರ ಶೆಟ್ಟಿ, ಅಮಿತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಜಾನಕಿ ಅವರನ್ನು ಸನ್ಮಾನಿಸಲಾಯಿತು

ಪದ್ಮುಂಜ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಸ್ವಾಗತಿಸಿ, ನಾರಾಯಣ ಗೌಡ ಹಾಗೂ ನವೀನ್ ಕುಮಾರ್ ಜೈನ್ ನಿರೂಪಿಸಿದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಲಕುಮಿ ತಂಡದ ಕುಸಲ್ದ ಕಲಾವಿದೆರ್ ಅಭಿನಯಿಸುವ ಆಂಟೀ ಬೂಕ್ಕ ಅಂಕಲ್ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya
error: Content is protected !!