23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಯ್ಯೂರು ಇದರ ವಾರ್ಷಿಕ ಕ್ರೀಡಾಕೂಟವು ಜ.11ರಂದು ದೇಲೋಡಿ, ವಾರಿಜಾ ಹೊನ್ನಪ್ಪ ಗೌಡರ ಮನೆಯಲ್ಲಿ ಜರುಗಿತು.

ಕ್ರೀಡಾ ಕೂಟವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜಾಹ್ನವಿ ಪೂರ್ಯಳ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರಾದ ಹರೀಶ್ ಗೌಡ ಪರಪಾಜೆ ಭಾಗವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿಜಯ ಕುಮಾರ್ ಎಂ. ವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಯುವ ವೇದಿಕೆ ಅಧ್ಯಕ್ಷ ಅಜಿತ್ ಬಜಿಲ, ಮಹಿಳಾ ವೇದಿಕೆ ಅಧ್ಯಕ್ಷೆ ವನಿತಾ ಕಡಮಾಜೆ, ದೇಲೋಡಿ ಮನೆಯ ಯಜಮಾನರಾದ ಹೊನ್ನಪ್ಪ ಗೌಡ, ಕೊಯ್ಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಯಾಮಣಿ, ಉಪಸ್ಥಿತರಿದ್ದರು.

ಒಲುಮೆ ರವರ ಪ್ರಾರ್ಥನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ನವೀನ್ ಗೌಡ ವಾದ್ಯಕೋಡಿ ಸ್ವಾಗತಿಸಿ, ದಾಮೋದರ ಗೌಡ ವಂದಿಸಿದರು. ಭರತ್ ಡೆಂಬುಗ ಕಾರ್ಯಕ್ರಮ ನಿರೂಪಿಸಿದರು.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya
error: Content is protected !!