September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಜಂಟಿ ಆಶ್ರಯದಲ್ಲಿ ನಡೆದ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರಕ್ಕೆ ಜ.13ರಂದು ತಾಲೂಕು ಪಂಚಾಯತ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು ಆಗಿದ್ದ ಪಂಚ ಗ್ಯಾರಂಟಿ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡಿ ಮಹಿಳೆಯರಿಗೆ ಶಕ್ತಿ ತುಂಬುತ್ತಿದೆ. ಸರಕಾರದ ಗ್ಯಾರಂಟಿ ಯೋಜನೆಯ ಸವಲತ್ತು ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಂಡಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ಅಭಿವೃದ್ಧಿ ಆಗುತ್ತಿದೆ. ಹೋಬಳಿ ಮಟ್ಟದಲ್ಲಿಯೂ ಶಿಬಿರ ಆಯೋಜಿಸಲು ಪ್ರಯತ್ನಿಸುತ್ತೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾತನಾಡಿ, ಗೃಹ ಲಕ್ಷ್ಮಿ ಹಣವನ್ನು ಪಡೆಯಲು ಎದುರಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಶಿಬಿರ ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ ಹೊಸ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡ ಅರ್ಹ ಗೃಹಿಣಿಯರಿಗೂ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ ಸಲ್ಲಿಸಿ 5 ತಿಂಗಳು ಕಳೆದು ಗೃಹಲಕ್ಷ್ಮಿ ಯೋಜನೆಯ ಹಣವು ವೈಯುಕ್ತಿಕ ಖಾತೆಗೆ ಜಮೆಯಾಗದ ಫಲಾನುಭವಿಗಳ ಖಾತೆಯನ್ನು ಪರಿಶೀಲಿಸಿ ಸಮಸ್ಯೆ ನಿವರಿಸಲಾಗುವುದು ಎಂದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ , ಆಹಾರ ಇಲಾಖೆಯ ವಿಶ್ವ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ ಕಿಲ್ಲೂರು, ಶರೀಫ್ ಸಬರಬೈಲು, ವಾಸುದೇವ ಭಟ್, ಸೌಮ್ಯ, ಮೆರಿಟಾ ಪಿಂಟೋ, ಅಬ್ದುಲ್ ಸಲಾಂ, ಸೌಮ್ಯ ಲಾಯಿಲ, ವಿಜಯ ಗೌಡ ಬೆಳಾಲು, ತಾಲೂಕು ಪಂಚಾಯತ್ ಅಧೀಕ್ಷಕ ಪ್ರಶಾಂತ್, ಸಿಡಿಪಿಒ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಕರ್ನಾಟಕ ಒನ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗೃಹ ಲಕ್ಷ್ಮಿಯ ಫಲಾನುಭವಿಗಳು ಉಪಸ್ಥಿತರಿದ್ದರು. ಅನುಷ್ಠಾನ ಸಮಿತಿಯ ಸದಸ್ಯೆ ವಂದನಾ ಭಂಡಾರಿ ಧನ್ಯವಾದವಿತ್ತರು.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!