September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

ಕಳಿಯ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ ಇರುವುದರಿಂದ ಬಾಲಕ ನಿಗೂಢವಾಗಿ ನಾಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಹಾಗೂ ಮನೆಯವರಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!