July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.16 ರಿಂದ ಆರಂಭಗೊಂಡು 25 ರ ವರೆಗೆ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎಂದಿನಂತೆ ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್‌ಗಳ ಆಶ್ರಯದಲ್ಲಿ ರಚನೆಯಾಗಿರುವ ಉರೂಸ್ ಸಮಿತಿಯ ನೇತೃತ್ವದಲ್ಲಿ ಉರೂಸ್ ಕಾರ್ಯಕ್ರಮಗಳು ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಮತ್ತು ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ, ಇಂಡಿಯನ್ ಗ್ರ‍್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಅವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ. ಸಯ್ಯಿದ್ ಇಸ್ಮಾಯಿಲ್ ತಂಙಳ್ ಸಹಿತ ಸಯ್ಯಿದರುಗಳು, ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಜ.16 ರಂದು ಕಿಲ್ಲೂರು ಮಸ್ಜಿದ್‌ನಿಂದ ವಿಶೇಷ ಸಂದಲ್ ಮೆರವಣಿಗೆ ಆಗಮಿಸಿ ಸಂಜೆ 7 ಗಂಟೆಗೆ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಧ್ವಜಾರೋಹಣ ನಡೆಸಲಿದ್ದಾರೆ. ಬಳಿಕ ವೇದಿಕೆಯಲ್ಲಿ ಯೆನಪೋಯ ವಿ.ವಿ ಕುಲಪತಿ ವೈ. ಅಬ್ದುಲ್ಲ ಕುಂಞ (ವೈ.ಎಮ್.ಕೆ) ಉರೂಸ್ ಉದ್ಘಾಟಿಸಲಿದ್ದಾರೆ. ಈ ಸಮಾರಂಭದಲ್ಲಿ ಡಾ. ಯು.ಟಿ ಇಫ್ತಿಕಾರ್ ಅಲಿ ಭಾಗವಹಿಸಲಿದ್ದಾರೆ.

ಉರೂಸ್ ಪ್ರಯುಕ್ತ 10 ದಿನಗಳಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ- ಕೇರಳದ ಪ್ರಸಿದ್ದ ವಾಗ್ಮಿಗಳಿಂದ ಧಾರ್ಮಿಕ ಪ್ರವಚನ ನಡೆಯಲಿದೆ. ಈ ಉಪನ್ಯಾಸ ಮಾಲಿಕೆಯನ್ನು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ. ಈ ಪೈಕಿ ಜ.18 ರಂದು ಮದನಿಯಂ ಮಜ್ಲಿಸ್ ನಡೆಯಲಿದೆ. ಜ.21 ರಂದು ಪೆರ್ಮುಗಂ ಅಶ್ರಫ್ ಉಸ್ತಾದ್ ನೇತೃತ್ವದಲ್ಲಿ ಇಸ್ಲಾಮಿಕ್ ಕಥಾಪ್ರಸಂಗ ನಡೆಯಲಿದೆ.

ಜ.22 ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ “ಬೃಹತ್ ದ್ಸಿಕ್ರ್ ಮಜ್ಲಿಸ್” ಗೆ ಸಯ್ಯಿದ್ ಅಬ್ದುರ‍್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಅಲ್ ಬುಖಾರಿ ಬಾಯಾರ್ ನೇತೃತ್ವ ನೀಡಲಿದ್ದಾರೆ. ಡಾ. ಕಾವಳಕಟ್ಟೆ ಹಝ್ರತ್ ಸಹಿತ ಉಲೆಮಾ ಪ್ರಮುಖರು ಭಾಗವಹಿಸಲಿದ್ದಾರೆ.
ಜ. 23 ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜು ವಿದ್ಯಾರ್ಥಿಗಳಿಗೆ ಧಾರ್ಮಿಕ ಪದವಿ ಪ್ರಧಾನ ಸಮಾರಂಭ, ಸಯ್ಯಿದ್‌ ಮರ್ಹೂಮ್ ಕಾಜೂರು‌ ತಂಙಳ್ ಬೀಬಿಯವರಿಂದ ಎರಡನೇ ವೇದಿಕೆಯಲ್ಲಿ ನಡೆಯಲಿದೆ.

ಜ.25 ರಂದು ಉರೂಸ್ ಸಮಾರೋಪ:

ಜನವರಿ 25 ರಂದು ಬೆಳಿಗ್ಗೆ ಉರೂಸ್ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ತೈಬಾ ಮರ್ಕಝ್ ಚೇರ್ಮೆನ್ ಸಯ್ಯಿದ್ ಸಾದಾತ್ ತಂಙಳ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಸಂಜೆ ಸಮಾರೋಪ ಸಮಾರಂಭಕ್ಕೆ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವ ನೀಡಲಿದ್ದಾರೆ. ಸಮಾರಂಭದಲ್ಲಿ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ವಕ್ಫ್ ಸಚಿವ ಬಿ.ಝೆಡ್ ಝಮೀರ್ ಅಹಮ್ಮದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮಾಧ್ಯಕ್ಷ ಕೆ ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕರುಗಳಾದ ಬಿ.ಕೆ ಹರಿಪ್ರಸಾದ್ ಮತ್ತು ಐವನ್ ಡಿಸೋಜ, ಮಾಜಿ ಸಚಿವರುಗಳಾದ ಬಿ ರಮಾನಾಥ ರೈ, ಗಂಗಾಧರ ಗೌಡ, ಮಾಜಿ ಶಾಸಕರುಗಳಾದ ಬಿ.ಎ ಮೊಯಿದಿನ್ ಬಾವಾ, ಬಿ.ಎಂ ಫಾರೂಕ್, ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಬೆಂಗಳೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗೂಫೂರ್, ಕಾರ್ಮಿಕ ನಿಗಮದ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ ಹಿದಾಯತುಲ್ಲ ಬೆಸ್ಟ್ ಫೌಂಡೇಶನ್ ಸಂಸ್ಥಾಪಕ ರಕ್ಷಿತ್ ಶಿವರಾಂ, ವಕ್ಫ್ ಸಲಹಾ ಸಮಿತಿ ನಿಕಟಪೂರ್ವಾಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್ ಕೊಡ್ಲಿಪೇಟೆ, ಇನಾಯತ್ ಆಲಿ, ಕಣಚೂರು ಮೋಣು ಹಾಜಿ, ಶಾಕಿರ್ ಹಾಜಿ ಐಶಂ, ಅಬ್ದುಲ್ ಕೆರೀಮ್ ಗೇರುಕಟ್ಟೆ, ಝಕರಿಯಾ ಹಾಜಿ ಜೋಕಟ್ಟೆ, ರಾಹ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅಕಾಡಮಿಕ್ ಡೈರೆಕ್ಟರ್ ಸಿದ್ದೀಕ್ ಮೋಂಟುಗೋಳಿ, ಮೊದಲಾದವರು ಭಾಗವಹಿಸಲಿದ್ದಾರೆ.

ವಿವಿಧ ದಿನಗಳಲ್ಲಿ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಯ್ಯಿದ್ ಕಿಲ್ಲೂರು ತಂಙಳ್, ಡಾ. ಝೈನಿ‌ ಉಸ್ತಾದ್, ಅಝೀಝ್ ದಾರಿಮಿ ಚೊಕ್ಕಬೆಟ್ಟು, ಮುಳ್ಳೂರ್‌ಕರೆ ಸಖಾಫಿ, ಹಾಫಿಳ್ ಸುಫಿಯಾನ್ ಸಖಾಫಿ ಮೊದಲಾದವರಲ್ಲದೆ ತಾಲೂಕು ಮತ್ತು ಜಿಲ್ಲೆಯ ಅನೇಕ ಸಯ್ಯಿದರುಗಳು, ಉಲಮಾಗಳು, ಸಾಮಾಜಿಕ- ಧಾರ್ಮಿಕ -ರಾಜಕೀಯ ನಾಯಕರುಗಳು ಭಾಗವಹಿಸಲಿದ್ದಾರೆ.

ಕಾಜೂರಿನಲ್ಲಿ‌ ಸಾಕಷ್ಟು ಶೈಕ್ಷಣಿಕ ಪ್ರಗತಿಯಾಗಿದ್ದು, ಜೊತೆಗೆ ಯಾತ್ರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿದಿನ ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ. ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ರವಿವಾರ ಬೆಲ್ಲದಗಂಜಿ ವಿತರಣೆ, ಉರೂಸ್ ಕೊನೆಯ ದಿನ ಸಾರ್ವಜನಿಕ ಮಹಾ ಅನ್ನದಾನ ನಡೆಯಲಿದೆ. ಜಾತಿ ಧರ್ಮ ಭೇದವಿಲ್ಲದೆ ರಾಜ್ಯ ಹೊರ ರಾಜ್ಯಗಳಿಂದಲೂ ಇಲ್ಲಿಗೆ ಜನ ಸಾಗರ ಹೆಜ್ಜೆ ಹಾಕಲಿದೆ.

ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು, ಪ್ರ. ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಜೊತೆ ಕಾರ್ಯದರ್ಶಿ
ಅಶ್ರಫ್ ಕಿಲ್ಲೂರು, ಸಮಿತಿ ಕೋಶಾಧಿಕಾರಿ ಡಿ.ವೈ ಉಮರ್, ದರ್ಗಾ ಸಮಿತಿ ಉಪಾಧ್ಯಕ್ಷ ಮಹಮ್ಮದ್ ಬಶೀರ್ ಅಹ್ಸನಿ ಕಾಜೂರು,
ಕಿಲ್ಲೂರು ಮಸ್ಜಿದ್ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ, ಉರೂಸ್ ಸಮಿತಿ ಹಿರಿಯ ಸದಸ್ಯ ಬದ್ರುದ್ದೀನ್ ಕಾಜೂರು
ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya
error: Content is protected !!