September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಜಂಟಿ ಸಹಭಾಗಿತ್ವದೊಂದಿಗೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆಯನ್ನು ಆಚರಿಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ . ಹರ್ಷಿಣಿ ಹಾಗೂ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ . ಹರ್ಷಿಣಿ ಮಾತನಾಡಿ , ಸ್ವಾಮಿ ವಿವೇಕಾನಂದರು ಬದುಕಿದ್ದು ಕೇವಲ 39 ವರ್ಷ ಮಾತ್ರ. ಆ 39 ವರ್ಷಕಾಲದಲ್ಲಿ ಅವರು ದೇಶವೆಲ್ಲಸಂಚರಿಸಿ ಯುವಕರನ್ನು ಬಡಿದೆಬ್ಬಿಸಬೇಕು, ಯುವಕರು ಜಾಗ್ರತರಾದರೆ ಮಾತ್ರ ನಮ್ಮ ದೇಶದ ನಿರ್ಮಾಣ ಸಾಧ್ಯ ಎಂದು ಜಗತ್ತಿಗೆ ಸಾರಿದ್ದಾರೆ. ಸ್ವಾಮಿ ವಿವೇಕಾನಂದರಿಗೆ ಶತಮಾನಗಳ ಹಿಂದೆಯೇ ಯೋಗದ ಬಗ್ಗೆ ಅಪಾರ ನಂಬಿಕೆಯಿತ್ತು . ಅವರು ಯೋಗವನ್ನು ಆಳವಾಗಿ ಅಭ್ಯಾಸ ಮಾಡಿ, ರಾಜಯೋಗ, ಕರ್ಮಯೋಗ, ಭಕ್ತಿಯೋಗ, ಜ್ಞಾನಯೋಗ ಎಂಬ 4 ಪುಸ್ತಕಗಳನ್ನು ಬರೆದಿದ್ದಾರೆ. ಸ್ವಾಮಿ ವಿವೇಕಾನಂದರು ದುರ್ಬಲ ಯುವಕರು ಬೇಡ ಸದ್ರಡ ಯುವಕರು ಬೇಕು ಅಂತಹ ನೂರು ಯುವಕರನ್ನು ಕೊಡಿ ಅವರಲ್ಲಿ ಉಕ್ಕಿನಂತಹ ಶಕ್ತಿಯಿದೆ ಅವರು ದೇಶವನ್ನು ಚೆನ್ನಾಗಿ ನಿರ್ಮಿಸುತ್ತಾರೆ ಎಂದು ಹೇಳುತಿದ್ದರು. ನೀವು ಅಂತಹ ಯುವಕರಾಗಬೇಕು ಎಂದು ಸಲಹೆ ನೀಡಿದರು .

ನೀವು ಯುವಕರು ಜೀವನದಲ್ಲಿ ಕನಸು ಕಾಣುವ ಸಮಯ. ಜೀವನದಲ್ಲಿ ಕನಸು ಮತ್ತು ಗುರಿ ಇದ್ದರೆ ಮಾತ್ರ ಜೀವನ ಬದಲಾಗುತ್ತದೆ, ಕನಸುಗಳಿಲ್ಲದಿದ್ದರೆ ಏನನ್ನೂಸಾಧಿಸಲು ಸಾಧ್ಯವಿಲ್ಲ ಎಂದರು. ಯುವಕರಾಗಿ ಸಮಯವನ್ನು ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಾ ಕಳೆಯದೆ ಜೀವನದಲ್ಲಿ ಏನಾದರು ಸಾಧನೆ ಮಾಡಿ, ಸಮಾಜಕ್ಕೆ ಏನಾದರು ಕೊಡುಗೆ ನೀಡಿ , ಹಿರಿಯರಿಗೆ ಗೌರವ ಕೊಡುವುದು, ಇತರರ ಕಷ್ಟ ಗಳಿಗೆ ಸ್ಪಂದಿಸುವ ಮನೋಭಾವ ಬೆಳಿಸಿಕೊಳ್ಳಿ ಎಂದು ಹೇಳಿದರು.

ನಿಮಗೆ ನಿಮ್ಮ ಮೇಲೆ ಆತ್ಮವಿಶ್ವಾಸ ವಿರಬೇಕು. ಎಲ್ಲವನ್ನು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಿ . ಆತ್ಮವಿಶ್ವಾಸ ಮತ್ತು ಧೈರ್ಯ ದಿಂದ ಮುನ್ನುಗಿದರೆ ನಮಗೆ ಒಂದಲ್ಲ ಒಂದು ದಿನ ಯಶಸ್ಸು ಸಿಗುತದೆ ಎಂದು ಹೇಳಿದರು.

ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಸ್ವಾಮಿ ವಿವೇಕಾನಂದರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದರು . ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತಿದ್ದರು. ವಿವೇಕಾನಂದರ ಜೀವನ ಚರಿತ್ರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಜನವರಿ 12 ವಿವೇಕಾನಂದರ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಅವರ ವಿಚಾರಧಾರೆಗಳು, ಚಿಂತನೆಗಳು, ಸಂದೇಶಗಳು, ನುಡಿಮುತ್ತುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬಲಿಷ್ಠ ಭಾರತವನ್ನು ನಿರ್ಮಾಣ ಮಾಡುವಲ್ಲಿ ಪ್ರಯತ್ನಿಸೋಣ ಎಂದು ಹೇಳಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರಕಾಶ್ ಗೌಡ, ವ್ಯವಸ್ಥಾಪಕ ಚಂದ್ರನಾಥ್ ಜೈನ್, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ವರ್ಷಾ ಕೆ. ಪಿ. ಸ್ವಾಗತಿಸಿ, ವೈಶಾಕ್ ಕೆ ಎಸ್ ನಿರೂಪಿಸಿದರು. ಮಾನ್ಯ ಡಿ ಪಿ ವಂದಿಸಿದರು.

Related posts

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!