September 6, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!