September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಬಂಗೇರ ಬ್ರಿಗೆಡ್ ಅಧ್ಯಕ್ಷೆ ಬಿನುತಾ ಬಂಗೇರರವರ ಸಾರಥ್ಯದಲ್ಲಿ, ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಜ 15 ರಂದು ಮದ್ದಡ್ಕ ಬಂಡಿಮಠ ಮೈದಾನದಲ್ಲಿ ನಡೆಯಿತು.

ಕಬಡ್ಡಿ ಪಂದ್ಯಕೂಟದ ಉದ್ಘಾಟನೆಯನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ಮೂಲಕ ನೆರವೇರಿಸಿ ಶುಭಕೋರಿದರು.

ಕ್ರೀಡಾಂಗಣ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ ನೇರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಅಮೆಚೂರು ಕಬಡ್ಡಿ ಅಸೊಶಿಯೇಶನ್ ಅಧ್ಯಕ್ಷ ರಂಜನ್ ಜಿ ಗೌಡ, ಆರ್ಯ- ಈಡಿಗ ಮಹಾ ಸಂಸ್ಥಾನ ಸೋಲೂರು ಪ್ರ.ಕಾರ್ಯದರ್ಶಿ ಧರ್ಮ ವಿಜೇತ್, ಬೆಂಗಳೂರು ವಿ.ಪಿ ಇನ್ವೆಸ್ಟ್ಮೆಮೆಂಟ್ ಸಂಜೀವ್ ಕಣೆಕಲ್, ಓಡೀಲು ದೇವಸ್ಥಾನದ ಪ್ರಧಾನ ಆರ್ಚಕ ರಾಘವೇಂದ್ರ ಭಟ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ, ಕಾರ್ಯದರ್ಶಿ ಶಾಂಭವಿ ಬಂಗೇರ,ನ್ಯಾಯವಾದಿ ಕೇಶವ ಬೆಳಾಲು, ಸುರೇಶ್ ಪೂಜಾರಿ,ವೃಷಭ ಆರಿಗ, ಪ್ರಭಾಕರ ನಾರಾವಿ,ಬಂಗೇರ ಬ್ರಿಗೇಡ್ ಪ್ರಮುಖರಾದ ಕೆ.ಸಲೀಮ್, ರಾಕೇಶ್ ಕುಮಾರ್ ಮೂಡುಕೋಡಿ, ಅನೂಪ್ ಎಂ ಬಂಗೇರ, ಗುರುದೇವ ಕಾಲೇಜಿನ ಪ್ರಾಂಶುಪಾಲರಾದ ಸವಿತಾ, ಸುಕೇಶ್ ಕುಮಾರ್,ಉಪ ಪ್ರಾಂಶುಪಾಲರಾದ ಶಮಿಯುಲ್ಲ ಉಪಸ್ಥಿತರಿದ್ದರು.

ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಪೂರ್ವಿ ದಿ.ವಸಂತ ಬಂಗೇರರವರ ಅನಿಸಿಕೆ ವ್ಯಕ್ತಪಡಿಸಿದರು.

ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಗೈದರು, ಬಂಗೇರ ಬ್ರಿಗೇಡ್ ಕೋಶಾಧಿಕಾರಿ ರಾಜಶ್ರೀ ರಮಣ್ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya
error: Content is protected !!