ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ರವಿರಾಜ ಬಳ್ಳಾಲ್ ಧರ್ಮಾನುರಾಗಿಗಳಾಗಿದ್ದು ಬಂಗಾಡಿ ಬಸದಿಯನ್ನೇ ಅತಿಶಯ ಕ್ಷೇತ್ರವಾಗಿ ಬೆಳೆಸಿದರು. ಸದಾ ಸ್ವಾಧ್ಯಾಯ ನಿರತರಾಗಿದ್ದ ಅವರು ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿ, ಆಧ್ಯಾತ್ಮಿಕ ಸಾಧನೆ ಬಗ್ಯೆ ಚಿಂತನ-ಮಂಥನ ನಡೆಸುತ್ತಿದ್ದರು.
ಬಂಗಾಡಿಯಲ್ಲಿ ಹಲವಾರು ಧರ್ಮಪ್ರಭಾವನಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕೃಷಿ, ತೋಟಗಾರಿಕೆಯಲ್ಲಿಯೂ ಅವರಿಗೆ ವಿಶೇಷ ಆಸಕ್ತಿ-ಅನುಭವ ಇತ್ತು.

ಧರ್ಮಸ್ಥಳದ ಪರಮ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.
ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆ ಬಗ್ಗೆ ಅವರು ಅಮೂಲ್ಯ ಕೃತಿಯೊಂದನ್ನೂ ರಚಿಸಿದ್ದರು.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!