ಮಡಂತ್ಯಾರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್‌ನ ಬಾಲಯೋಗಿ ಗಜಿ ಚಾಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ 26ನೇ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಯತೀಂದ್ರ ಎ, 56 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.











