25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಕರಿಮಣೇಲು, ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜ.22 ರಿಂದ ಜ.24ರವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಚಂದ್ರಶೇಖರ ಅಸ್ರಣ್ಣರವರ ಪೌರೋಹಿತ್ಯದಲ್ಲಿ
ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ದೈವ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಚಿಗುರು ತಿಳಿಸಿದ್ದಾರೆ.

ಜ.22 ಬೆಳಿಗ್ಗೆ ನವಕ ಕಲಶಾಭಿಷೇಕ, ಗಣಹೋಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ. ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ , ಸಂಜೆ ಭಜನೆ, ರಾತ್ರಿ ರಂಗಪೂಜೆ, ನಿತ್ಯಬಲಿ ಉತ್ಸವ

ಜ.23 ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಮುಹೂರ್ತ ಕಂಭ, ಮಧ್ಯಾಹ್ನ ಗುರ್ಜಿ ಹಾಕುವುದು. ಸಂಜೆ ಗುತ್ತುಗಳಿಂದ ದೈವಗಳ ಭಂಡಾರ ಆಗಮನ., ರಾತ್ರಿ ನಿತ್ಯಬಲಿ, ಉತ್ಸವ. ಶ್ರೀ ದೈವ, ಶ್ರೀ ಕೊಡಮಣಿತ್ತಾಯ ನೇಮೋತ್ಸವ.

ಜ.24 ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಧಾರ್ಮಿಕ ಸಭೆ, ರಾತ್ರಿ ರಂಗಪೂಜೆ, ಪರಿವಾರ ದೇವರುಗಳಿಗೆ ವಿಶೇಷ ಪೂಜೆ, ಉತ್ಸವ, ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ.

Related posts

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya
error: Content is protected !!