37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿ ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ 42 ರಲ್ಲಿ ಉಪಬಂಧಿಸಿರುವಂತೆ ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರ ಅವಧಿಯು, ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು, 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ. ಈ ಹಿಂದೆ 2020-2025 ನೇ ಸಾಲಿಗೆ ರಚಿತವಾಗಿದ್ದ ರಾಜ್ಯದ ಗ್ರಾಮ ಪಂಚಾಯಿತಿಗಳ ಅವಧಿಯು 2026ನೇ ಜನವರಿ, ಫೆಬ್ರವರಿ, ಮಾರ್ಚ್ ಹಾಗೂ ಮುಂದಿನ ತಿಂಗಳುಗಳ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳುತ್ತವೆ ಎಂದಿದ್ದಾರೆ.

2026-2031ರ ಅವಧಿಗಾಗಿ ಈ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಗ್ರಾಮ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್ ಅಧಿನಿಯಮ 1993 ರ ಪ್ರಕರಣ 8(iii) ರನ್ವಯ ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳನ್ನು ನೇಮಿಸಲು ಅವಕಾಶವಿರುತ್ತದೆ. ಇದರನ್ವಯ ಜಿಲ್ಲಾಧಿಕಾರಿಗಳು ಸಂಬಂಧ ಪಟ್ಟ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ರಚನೆಯಾಗಿರುವ ಹಾಗೂ ಮುಕ್ತಾಯಗೊಂಡಿರುವ ದಿನಾಂಕಗಳನ್ನು ಪಡೆದು ಪರಿಶೀಲಿಸಿ, ಗ್ರಾಮ ಪಂಚಾಯಿತಿಗಳು ಮುಕ್ತಾಯಗೊಳ್ಳಲಿರುವ ದಿನಾಂಕದ ಮುಂದಿನ ದಿನಾಂಕದಿಂದ ಜಾರಿಗೆ ಬರುವಂತ ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

Related posts

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!