22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ “ಇದು ಬೆಳ್ತಂಗಡಿ ತಾಲ್ಲೂಕಿಗೆ ಹೆಮ್ಮೆಯ ಕ್ಷಣ. ಐಯುಐ ವಿಭಾಗವು ಇಲ್ಲಿನ ಜನರಿಗೆ ಅತ್ಯಂತ ಅಗತ್ಯವಾಗಿತ್ತು. ಇದು ಡಾ. ಗೋಪಾಲಕೃಷ್ಣ ಹಾಗೂ ಡಾ. ಭಾರತಿ ಜಿಕೆ ಅವರ ಕನಸಿನ ಫಲಿತಾಂಶವಾಗಿದೆ. ಐಯುಐ ಚಿಕಿತ್ಸೆಯ ಲಾಭಗಳ ಬಗ್ಗೆ ಇನ್ನೂ ಅನೇಕರು ತಿಳಿದುಕೊಂಡಿಲ್ಲ. ಈ ಸೇವೆ ತಾಲ್ಲೂಕಿನ ಜನರಿಗೆ ಬಹಳ ಸಹಕಾರಿಯಾಗಲಿದೆ” ಎಂದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಅವರು ಮಾತನಾಡಿ, ಬೆನಕ ಆಸ್ಪತ್ರೆಯಲ್ಲಿ ಐವಿಎಫ್ (IVF) ಕೇಂದ್ರ ಸ್ಥಾಪಿಸುವುದು ನನ್ನ ಮುಂದಿನ ದೊಡ್ಡ ಕನಸಾಗಿದೆ. ಪ್ರಸ್ತುತ ಐಯುಐ ವಿಭಾಗವನ್ನು ಪ್ರಾರಂಭ ಮಾಡಿದ್ದೇವೆ. ಇದೇ ಸಂದರ್ಭದಲ್ಲಿ ಡಾ. ನವ್ಯ ಭಟ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.
ಡಾ. ಭಾರತಿ ಜಿಕೆ ಅವರು ಮಾತನಾಡಿ, “ಹಿಂದಿನ ದಿನಗಳಲ್ಲಿ ಬಂಜೆತನದ ಸಮಸ್ಯೆ ಇರುವ ಅನೇಕ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಹಾಗೂ ಬೆಂಗಳೂರಿಗೆ ಕಳುಹಿಸಬೇಕಾಗುತ್ತಿತ್ತು. ಈಗ ನಮ್ಮದೇ ಆಸ್ಪತ್ರೆಯಲ್ಲಿ ಐಯುಐ ಚಿಕಿತ್ಸೆ ಲಭ್ಯವಿರುವುದರಿಂದ ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ರೀರೋಗ ಹಾಗೂ ಐವಿಎಫ್ ತಜ್ಞೆಯಾದ ನವ್ಯ ಭಟ್ ಮಾತನಾಡಿ, ಐಯುಐ ಚಿಕಿತ್ಸೆಯ ಎಂಬುದು ಸರಳ ಹಾಗೂ ಸುರಕ್ಷಿತ ಚಿಕಿತ್ಸೆಯಾಗಿದೆ. ಬಂಜೆತನವಿರುವ ಮಹಿಳೆಯ ಪತಿಯ ಆರೋಗ್ಯಕರ ವೀರ್ಯವನನ್ನು ಆಯ್ಕೆ ಮಾಡಿ, ಸರಿಯಾದ ಸಮಯದಲ್ಲಿ ಪತ್ನಿಯ ಗರ್ಭಾಶಯದೊಳಗೆ ನೇರವಾಗಿ ಇಂಜೆಕ್ಷನ್ ಮೂಲಕ ಕೊಡಲಾಗುತ್ತದೆ. ಈ ವಿಧಾನದಿಂದ ಗರ್ಭಧಾರಣೆಯ ಸಾಧ್ಯತೆ ಹೆಚ್ಚಾಗುತ್ತದೆ.


ಯಾವುದೇ ನೋವಿಲ್ಲದೇ, ಕೆಲವೇ ಸಮಯಗಳನ್ನು ಪೂರ್ಣಗೊಳ್ಳುವ ಪ್ರಕ್ರಿಯೆಯಾಗಿದೆ. ಮುಖ್ಯವಾಗಿ ಬಂಜೆತನ ಸಮಸ್ಯೆ ಎದುರಿಸುತ್ತಿರುವ ದಂಪತಿಗಳು ಬೆನಕ ಆಸ್ಪತ್ರೆಗೆ ಬಂದು ಈ ಸೇವೆಯನ್ನು ಬಳಸಿಕೊಳ್ಳಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತುರ್ತುಚಿಕಿತ್ಸಾ ವೈದ್ಯರಾದ ಡಾ. ಆದಿತ್ಯ ರಾವ್, ಸ್ತ್ರೀರೋಗ ತಜ್ಞೆ ಹಾಗೂ ಕೀರಂಧ್ರ ಶಸ್ತ್ರ ಚಿಕಿತ್ಸೆ ತಜ್ಞರಾದ ಡಾ. ಅಂಕಿತಾ ಜಿ ಭಟ್ , ಆಸ್ಪತ್ರೆಯ ಜನರಲ್ ಮ್ಯಾನೇಜರ್ ದೇವಸ್ಯ ವರ್ಗೀಸ್ ಉಪಸ್ಥಿತರಿದ್ದರು.


ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಎಸ್. ಜಿ. ಭಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!