22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

ಪುಂಜಾಲಕಟ್ಟೆ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ನಿರಂಜನ್ ಜೈನ್ ಐ ಇವರು ಮಕ್ಕಳಿಗೆ ಪ್ರಶಂಸನ ಪತ್ರ ನೀಡಿ ಶುಭ ಹಾರೈಸಿದರು.

ಕರ್ನಾಟಕ ಸರ್ಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಂಸ್ಥೆಯಿಂದ 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡ 100 ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಇದರಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸೂಕ್ತ ಸಲಹೆ ಸೂಚನೆ ಹಾಗೂ ತರಬೇತಿ ನೀಡಿದ ಸದಾನಂದ ಬಿರಾದಾರ್ ಚಿತ್ರಕಲಾ ಶಿಕ್ಷಕರನ್ನು ಈ ಸಂದರ್ಭದಲ್ಲಿ ಸ್ನೇಹದಿಂದ ಪ್ರೋತ್ಸಾಹಿಸಲಾಯಿತು. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದಿಸಿ ಗೌರವಿಸಿದರು.

ಫಲಿತಾಂಶದ ವಿವರ ಲೋಹರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದವರು ದೀಕ್ಷಿತ್ ಡಿ.(417), ಹರ್ಷಿತ (414),
ಸುಶೃತ್ ಶರ್ಮ (409), ಪ್ರಣಮ್ (398) , ಶಿವಾನಂದ್ ಲಕ್ಕಪ್ಪ ಸೂರಣ್ಣನವರ 377 , ಮೇಘಶ್ರೀ 396, ದಿಶಾನ್ 379 ವೈಷ್ಣವಿ 364, ಅತ್ಯುನತ ಶ್ರೇಣಿ ಮಾನ್ವಿ ಎಂ 482, ಅಂಕಿತ 481, ನೈಮಾ ಬಾನು 427, ಶ್ರದ್ದಾ 427, ಅನನ್ಯ 430, ಸಾನಿಕ 430, ಚೇತನ್ 420,
ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಫಲಿತಾಂಶ ಪಡೆದವರು: ಜಯರಾಮ 414, ಸಿಂಚನ 412, ರಕ್ಷಿತಾ 406, ಸೃಷ್ಟಿ 404, ಲಿಖಿತ 395, ಪಲ್ಲವಿ 392, ತೃಷಾ ಶೆಟ್ಟಿ 394, ಅತ್ಯುನ್ನತ ಶ್ರೇಣಿ ಪ್ರೀತಮ್ 472 , ಭುವನೇಶ್ 466,ಭೂಷಣ್ 465 , ಶಶಾಂಕ್ 449,ಪ್ರಜ್ಞಾ 448 , ಚಿತ್ರಾ 439, ವೀಕ್ಷಿತಾ 439 , ಶಿಯಾ 435, ರೇಖಾ 427 , ನಯನ 425.

Related posts

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya
error: Content is protected !!