27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

ಬೆಳ್ತಂಗಡಿ: ಜ.26ರಂದು ಬೆಂಗಳೂರಿನ ಮಾಣಿಕ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಗಣರಾಜ್ಯೋತ್ಸವ ಪಥಸಂಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರ ತಂಡಕ್ಕೆ ಗುರುವಾಯನಕೆರೆಯ ಟಿ. ಸುದರ್ಶನ್ ನಾಯಕ್ ಅವರು ಆಯ್ಕೆಯಾಗಿದ್ದು ಪ್ರಸ್ತುತ ಯುವ ತರಬೇತಿ ಕೇಂದ್ರ, ಕುಂಬಳಗೂಡು, ಬೆಂಗಳೂರುನಲ್ಲಿ ನಡೆಯುವ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕರಾಗಿದ್ದಾರೆ. ಇವರು ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಈಗಾಗಲೇ ಕಾರವಾರದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರ, ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲೂ ಪಾಲ್ಗೊಂಡಿದ್ದಾರೆ. ಅಲ್ಲದೆ, ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರ ಹಾಗೂ ಕೇರಳದಲ್ಲಿ ನಡೆದ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರದಲ್ಲೂ ಭಾಗವಹಿಸಿ ಉತ್ತಮ ಅನುಭವ ಪಡೆದಿದ್ದಾರೆ.

Related posts

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!