September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಪ್ರತೀ ವರ್ಷ ಸ್ವಉದ್ಯೋಗ ಆಧಾರಿತ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದಾರೆ. ಫಲಾನುಭವಿಗಳು ಇದನ್ನು ತಮ್ಮ ಸ್ವಾವಲಂಬಿ ಬದುಕಿಗೆ ಪ್ರೇರೇಪಿಸಿಕೊಳ್ಳಬೇಕು. ಯಾರಲ್ಲಿ ಛಲ ಇಚ್ಛಾಶಕ್ತಿ ಇರುತ್ತದೆಯೋ ಅವರು ಯಶಸ್ಸು ಗಳಿಸಬಹುದು. ಯಶಸ್ಸಿಗೆ ಕಠಿಣ ಪರಿಶ್ರಮ ಪಡಬೇಕು ಎಂದು ಸಮಾರೋಪ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕೃಷ್ಣ ಟಿ. ಇವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲ ರಮೇಶ್ ಇವರು ಉದ್ಯೋಗದಲ್ಲಿ ಪರಿಪೂರ್ಣತೆ ಹೊಂದಲು ನಿರಂತರ ಅಭ್ಯಾಸ ಮತ್ತು ಕಲಿಕಾ ಮನೋಭಾವ ಇರಬೇಕು. ಹಾಗಿದ್ದಾಗ ಅದರ ಫಲ ಸಿಗಲು ಸಾಧ್ಯ ಎಂದರು. ನಂತರ ಎಲ್ಲಾ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.


ಒಟ್ಟು 45 ಮಂದಿ ಮಂದಿ ಅಭ್ಯರ್ಥಿಗಳು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಕು. ಹರ್ಷಿತಾ ಮೇಕಪ್ ಆರ್ಟಿಸ್ಟ್ ಇವರು ತರಗತಿ ನೀಡಿದ್ದಾರೆ. ಟೈಲರಿಂಗ್ ಶಿಕ್ಷಕಿ ಉಷಾ ಉಪಸ್ಥಿತರಿದ್ದರು. ತರಬೇತಿ ಸಂಯೋಜಕಿ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya
error: Content is protected !!