37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’ ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ, ಸುರಕ್ಷಾ, ಪಲ್ಲವಿ, ಧನುಶ್ರೀ, ಪೂಜಾ, ಭೂಮಿಕ, ಸಹನಾ, ಸುಪ್ರಿಯ ಹಾಗೂ ದೀಪಿಕಾ ಭಾಗವಹಿಸಿದ್ದರು. ಪ್ರಶಸ್ತಿ ವಿಜೇತ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ತರಬೇತಿಯನ್ನು ನೀಡಿದ್ದಾರೆ.

ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಪ್ರಮೋದ್ ಕುಮಾರ್ ಬಿ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!