September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, “ಇಂದಿನ ಜೀವನದಲ್ಲಿ ಈ ಮೂರು ತರಬೇತಿ ವಿಷಯಗಳು ಅತ್ಯಂತ ಅವಶ್ಯಕವಾಗಿವೆ. ಕಲಿತ ವೃತ್ತಿಯನ್ನು ಆತ್ಮವಿಶ್ವಾಸದಿಂದ ಸ್ವ ಉದ್ಯೋಗವಾಗಿ ಕೈಗೊಂಡು, ಸ್ವಾವಲಂಬಿ ಜೀವನ ನಡೆಸಬೇಕು. ಶ್ರಮ ಮತ್ತು ಶಿಸ್ತಿನಿಂದ ತೊಡಗಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್, ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ವಿರೂಪಾಕ್ಷ ಮತ್ತು ದೇವರಾಜ್, ಹಾಗೂ ಶ್ರೀಮತಿ ಮಾಧವಿ ರೈ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ರುಡ್ ಸೆಟ್ ಸಂಸ್ಥೆಯಲ್ಲಿ ಪಡೆದ ಕೌಶಲ್ಯಾಧಾರಿತ ತರಬೇತಿ, ಮಾರ್ಗದರ್ಶನ ಹಾಗೂ ಸ್ವ ಉದ್ಯೋಗದತ್ತ ಪಡೆದ ಪ್ರೇರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!