September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

ಬೆಳ್ತಂಗಡಿ : ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಚಾಮಾ೯ಡಿ ಗ್ರಾಮದ ನಿವಾಸಿಗಳಿಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ, 106 ಗ್ರಾಂ ಗಾಂಜಾ‌ ವಶಪಡಿಸಿಕೊಂಡ ಪ್ರಕರಣ ಜ.19ರಂದು ವರದಿಯಾಗಿದೆ.


ಘಟನೆ ಹಿನ್ನೆಲೆ:
ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಿ , ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37ವ) ಎಂಬುದಾಗಿ ತಿಳಿಸಿದ್ದ. ಆತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿರುತ್ತದೆ.

ಆ ಬಳಿಕ ಗೂಡ್ಸ್ ವಾಹನದ ಚಾಲಕನ ಬಳಿ ವಿಚಾರಿಸಿದಾಗ, ಆತನು, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37ವ) ಎಂಬುದಾಗಿ ತಿಳಿಸಿದ್ದು, ಆತನ ವಾಹನ ಪರಿಶೀಲಿಸಿದಾಗ ಸದ್ರಿ ವಾಹನದಲ್ಲಿ 106 ಕಿ. ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ರೂ.53 ಸಾವಿರ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಚಾಲಕನಲ್ಲಿ ವಿಚಾರಿಸಿದಾಗ ಸದ್ರಿ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿರುತ್ತಾನೆ. ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ , ಸದ್ರಿ ಗಾಂಜಾವನ್ನು, ಸಾಗಾಣಿಕೆಗೆ ಬಳಸಿದ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:09/2026, ಕಲಂ: 8(c), 20(b)(ii)C NDPS Act-1985. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ, ವಿನೋದ್ ರವರುಗಳನ್ನು ಒಳಗೊಂಡ ತಂಡ ಕಾರ್ಯನಿರ್ವಹಿಸಿದೆ.

Related posts

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya
error: Content is protected !!