37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಮಿ ವಿವೇಕಾನಂದರು ನಡೆದು ಬಂದ ಹಾದಿ ಮತ್ತು ಮಾಡಿದಂತಹ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಮುಖ್ಯ ಅತಿಥಿಯಾಗಿ ಬೋಲ್ಮಾನರ್ ಓಂ ಶಕ್ತಿ ಭಜನಾ ಮಂಡಳಿಯ ಗೌರವಾಧ್ಯಕ್ಷ ದಾಮೋದರ ಗೌಡ ಇವರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಭಾಷಣವನ್ನು ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಶಿಕ್ಷಕ ಗೌರೀಶ್ ಸ್ವಾಗತಿಸಿ, ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya
error: Content is protected !!