22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಉಜಿರೆ : ಪಂದ್ಯಾಟಗಳಲ್ಲಿ ಸೋಲು ಮತ್ತು ಗೆಲುವು ಸಹಜ ಆದರೆ ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಿಕೆ ಹೊಸ ಅನುಭವಗಳನ್ನು ನೀಡುತ್ತದೆ ಜೊತೆಗೆ ಗೆಲ್ಲಲೇ ಬೇಕು ಎಂಬ ಪ್ರೇರಣೆಯನ್ನು ನಮ್ಮೊಳಗೆ ಮೂಡಿಸುತ್ತದೆ. ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಸ್ನೇಹ, ಸಂಯಮ, ಏಕಾಗ್ರತೆ ಮತ್ತು ನಾಯಕತ್ವದ ಗುಣಗಳು ಬೆಳೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಕ್ರೀಡಾ ಬದುಕಿನಲ್ಲಿ ಶಿಸ್ತು ಮತ್ತು ತಾಳ್ಮೆಯನ್ನು ಸದಾ ಮೈಗೂಡಿಸಿಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಅಭಿಪ್ರಾಯ ಪಟ್ಟರು.

ಇವರು ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ಎಸ್.ಡಿ.ಎಂ ಸಿಎನ್ ವೈಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ, ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ವಿಶೇಷ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಇದರ ಅಂಗವಾಗಿ ಅನೇಕ ಕ್ರೀಡಾ ಕಾರ್ಯಕ್ರಮಗಳು ಇಲ್ಲಿ ಆಯೋಜನೆಗೊಂಡಿವೆ. ವಿದ್ಯಾರ್ಥಿಗಳು ಕ್ರೀಡಾ ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಉಪ ಪ್ರಾಚಾರ್ಯರಾದ ಡಾ. ಸುಜಾತಾ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜಿನಿಂದ ಆಗಮಿಸಿದ್ದ ಕ್ರೀಡಾ ಪಟುಗಳಿಗೆ ಶುಭಾಶಯವನ್ನು ಕೋರಿ ಅಭಿನಂದಿಸಿದರು. ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ರಾಜ್ಯ ಮಟ್ಟದ ಪಂದ್ಯಾಟಕ್ಕೆ ವ್ಯವಸ್ಥಿತವಾಗಿ ಸಜ್ಜುಗೊಳಿಸಿದ್ದ ಕ್ರೀಡಾಂಗಣದ ಎರಡು ತ್ರೋಬಾಲ್ ಅಂಕಣಗಳ ರಿಬ್ಬನ್ ಎಳೆದು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗು ತೀರ್ಪು ಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪೂಜ, ನಿರೂಪಿಸಿ, ವಿದ್ಯಾರ್ಥಿನಿ ಲಿಖಿತ ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಸಂಧ್ಯಾ ವಂದಿಸಿದರು. 2 ದಿನಗಳ ರಾಜ್ಯ ಮಟ್ಟದ ಅಂತರ್ ವಲಯಗಳ ಪುರುಷ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾಟವನ್ನು ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಉಪನ್ಯಾಸಕ ಧರ್ಮೇಂದ್ರ ಕುಮಾರ್ ಸಂಯೋಜಿಸಿದರು.

ರಾಜ್ಯದ 6 ವಲಯದ ತಂಡಗಳು ಭಾಗಿ :ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ರಾಜ್ಯದ 6 ವಲಯಗಳಾದ ಮಂಗಳೂರು, ಮೈಸೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ದಾವಣಿಗೆರೆ ಮತ್ತು ವಿಜಯಪುರ ಜಿಲ್ಲೆಗಳ ಪೈಕಿ, ಈ ಹಿಂದೆ ವಲಯ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿ ವಿಜೇತರಾದ ಪ್ರತಿ ಜಿಲ್ಲೆಯ ಎರಡೆರಡು ತಂಡಗಳು ಅಂತರ್ ವಲಯಗಳ ತಂಡಗಳ ಜೊತೆ‌ ಸೆಣಸಾಡಲಿವೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya
error: Content is protected !!