September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ,ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು ಪಡೆದ ಭವೇಶ್ ಸೀರ್ವಿ ರಾಜ್ಯದಲ್ಲೇ ಅದ್ವಿತೀಯ ಸಾಧಕನಾಗಿ ಗುರುತಿಸಿಕೊಂಡಿದ್ದಾನೆ. ಸಂಜನಾ ಎಸ್ ಜಿ 175, ತನಯ್ ವಿ ಎ 173, ಮಹಮ್ಮದ್ ಸಾಹಿಲ್ 173 , ಜೀವನ್ 155,ಶೀತಲ್ ಕೆ ಆರ್ 144, ಮುರಳಿ ಆರ್ 143,ಅರವಿಂದ್ 128, ಭಾನುಪ್ರಕಾಶ್ 115,ವಿದ್ಯಾ ಗೌರಿ ಗೌಡ 115 ಅಂಕಗಳನ್ನು ಪಡೆದು ಕೊಂಡು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ನೀಟ್, ಜೆಇಇ, ಸಿಇಟಿ ಮೊದಲಾದ ಕೋಚಿಂಗ್ ಅತ್ಯುತ್ತಮ ಮಟ್ಟದಲ್ಲಿ ಇದ್ದರೆ,

ವಾಣಿಜ್ಯ ವಿಭಾಗದಲ್ಲಿ ಸಿಎ, ಸಿಎಸ್, ಕ್ಲಾಟ್ ಕೋಚಿಂಗ್ ಉನ್ನತ ಮಟ್ಟದಲ್ಲಿದೆ. ಹೀಗಾಗಿಯೇ ವಾಣಿಜ್ಯ ವಿಭಾಗದ ಸಿ ಎಸ್ ಫಲಿತಾಂಶದಲ್ಲೂ ಎಕ್ಸೆಲ್ ನ ವಿದ್ಯಾರ್ಥಿಗಳು ನೂತನ ದಾಖಲೆ ಸ್ಥಾಪಿಸಿದ್ದಾರೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು,ಡೀನ್, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!