25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಸಮುದಾಯ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ವಲಯದ ವಲಯಾಧ್ಯಕ್ಷ ರಮಾನಂದ ಪೂಜಾರಿ ವಹಿಸಿದರು. ನಿಕಟ ಪೂರ್ವ ವಲಯಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ರವರು ದೀಪ ಬೆಳಗಿಸುದರೊಂದಿಗೆ ಉದ್ಘಾಟಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಯೋಜನಾಧಿಕಾರಿಯವರಾದ ಅಶೋಕ್ ರವರು ಒಕ್ಕೂಟದ ಮಹತ್ವ, ಪದಾಧಿಕಾರಿಗಳ ಜವಾಬ್ದಾರಿ, ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ, ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಿಕೊಡುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ರಿಕವರಿ ಯೋಜನಾಧಿಕಾರಿಯವರಾದ ಆನಂದ್ ರವರು ಬಡ್ಡಿದರದ ಲೆಕ್ಕಾಚಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ವಲಯದ ಮೇಲ್ವಿಚಾರಕಿ ಶಿಲ್ಪಾ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya
error: Content is protected !!