ಉಜಿರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ICSI) ವತಿಯಿಂದ ಜನವರಿ 2026ರಲ್ಲಿ ನಡೆಸಲಾದ ಕಂಪನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್ (CSEET) ಪರೀಕ್ಷೆಯಲ್ಲಿ ಎಸ್‌ಡಿಎಂ ಪಿಯು ಕಾಲೇಜು, ಉಜಿರೆಯ ತ್ರುಪ್ತಿ ಮತ್ತು ವಿಕಾಸ್ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಪರಿಶ್ರಮ ಮತ್ತು ನಿಷ್ಠೆಯನ್ನು ಶ್ಲಾಘಿಸಿದರು. ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.











