32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ
ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ ಕಾರ್ಯಕ್ರಮ ಜ.25 ರಂದು ವೈಭವ ಪೂರ್ಣವಾಗಿ ಜರುಗಿತು.
ರಂಗ ಮಂದಿರವನ್ನು ತುಳು ಕೂಟ ಬರೋಡ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಲೋಕಾರ್ಪಣೆ ಮಾಡಿದರು, ಸ್ವಾಗತ ದ್ವಾರದ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ನೆರವೇರಿಸಿದರು.


ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಶಾಲಾ ಸಂಸ್ಥಾಪಕ ಮನೆತನದ ಧನಂಜಯ ಅಜ್ರಿ, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್, ಜಮಾಲಾಬಾದ್ ಮಸೀದಿ ಧಮ೯ಗುರು ಮೌಲಾನಾ ಸೈಯದ್ ಹಕೀಲ್ ಶಾ, ಮಂಜೊಟ್ಟಿ ಚರ್ಚ್ ಧರ್ಮಗುರು ಫಾ|ಪಾವ್ಲ್ ಸೆಬಾಸ್ಟಿಯನ್ ಡಿ.ಸೋಜ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ, ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ಅಲೋಶಿಯಸ್ ಲೋಬೋ,


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಧರ ಭಾಗವಹಿಸಿದ್ದರು.
ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪುಷ್ಪಾ, ಕೋಶಾಧಿಕಾರಿ ಸಯ್ಯಾದ್ ಹಬೀಬ್ ಸಾಹೇಬ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ವಿದ್ಯಾರ್ಥಿ ನಾಯಕ ಚಿರಾಗ್ ಉಪಸ್ಥಿತರಿದ್ದರು.
ಬೆಳಿಗ್ಗೆ ಆಕಷ೯ಕ ಮೆರವಣಿಗೆಗೆ ಸುಯ೯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಎಸ್. ಚಾಲನೆ ನೀಡಿದರು. ಗುರುವಂದನೆ ಕಾರ್ಯಕ್ರಮದಲ್ಲಿ
ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶಿಕ್ಷಕರನ್ನು ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ ಸ್ವಾಗತಿಸಿದರು. ಯತೀಶ್ ಕಾರ್ಯಕ್ರಮ ನಿರೂಪಿಸಿದರು. ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya
error: Content is protected !!