24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.2.50 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಅವರು ತಿಳಿಸಿದ್ದಾರೆ.

ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಅಗತ್ಯತೆ ಕುರಿತು ಈಗಾಗಲೇ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಗಿತ್ತು. ಉಮ್ಮಂತಿ ಮಾರ ಪ್ರದೇಶದಲ್ಲಿ ಚೆಕ್ ಡ್ಯಾಂ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿ ಜಾರಿಯಾದಲ್ಲಿ ನೂರಾರು ಎಕರೆ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಲಭಿಸಿ ಕೃಷಿ ಉತ್ಪಾದನೆ ಹೆಚ್ಚಾಗಲಿದೆ. ಈ ಯೋಜನೆಯ ಮಹತ್ವವನ್ನು ಮಾನ್ಯ ಸಣ್ಣ ನೀರಾವರಿ ಸಚಿವರು ಹಾಗೂ ಇಲಾಖಾ ಕಾರ್ಯದರ್ಶಿಗಳ ಗಮನಕ್ಕೆ ತಂದು ಅಗತ್ಯ ಮನವರಿಕೆ ಮಾಡಿದ ಫಲವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಕಾಮಗಾರಿಗೆ ರೂ.2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಯೋಜನೆಗೆ ಸಹಕಾರ ನೀಡಿದ ರಾಜ್ಯ ಸರ್ಕಾರಕ್ಕೆ, ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ರೈತರ ಬಹುಕಾಲದ ಬೇಡಿಕೆ ಈಡೇರಿರುವುದರಿಂದ ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!