ಬೆಳ್ತಂಗಡಿ; ಕಾಜೂರು ಮಖಾಂ ಶರೀಫ್ ನಲ್ಲಿ ನಡೆಯುತ್ತಿರುವ ಉರೂಸ್ ಸಂಭ್ರಮದ ಸಮಾರೋಪ ಕಾರ್ಯಕ್ರಮ ಜ.25 ರಂದು ಜರುಗಲಿದೆ.
ಇದರಂಗವಾಗಿ ಮಧ್ಯಾಹ್ನ 2.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಾಜೂರು ಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ನಡೆಯುವ ಉರೂಸ್ ಸಮಾರಂಭದಲ್ಲಿ ಗಣ್ಯ ಮಾನ್ಯ ವಿದ್ವಾಂಸರುಗಳಲ್ಲದೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಸಹಿತ ಅನೇಕ ಮಂದಿ ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಉರೂಸ್ ಸಮಿತಿ ಪ್ರ. ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











