September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ವಿಭಾಗದ ಸಹಯೋಗದೊಂದಿಗೆ 77 ನೆಯ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಭಾರ ಪ್ರಾಂಶುಪಾಲರಾದ ಜಯಶ್ರೀ ನೆರವೇರಿಸಿ ಇಂದಿನ ದಿನ ನಾವೆಲ್ಲರೂ ಹೆಮ್ಮೆಪಡುವ ದಿನವಾಗಿದೆ. ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡುವುದರೊಂದಿಗೆ ದೇಶದ ಗೌರವವನ್ನು ಉಳಿಸಿ ಬೆಳೆಸಬೇಕು. ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆಯೊಂದಿಗೆ ತಮ್ಮನ್ನು ತಾವು ಶೈಕ್ಷಣಿಕ ಕ್ಷೇತ್ರಕ್ಕೆ ಕಟಿ ಬದ್ಧರಾಗಿ ತೊಡಗಿಸಿಕೊಳ್ಳಬೇಕು ಎಂದರು.

ಸರಳ ಸಮಾರಂಭವು ಸಂಸ್ಥೆಯ ಉಪ ಪ್ರಾಂಶುಪಾಲರಾದ ನಿರಂಜನ್ ಜೈನ್ ಐ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಾದ ಯೋಗೀಶ್ ಆಚಾರ್ಯ, ದೇವದಾಸ್ ಮುಂತಾದವರು ಉಪಸ್ಥಿತರಿದ್ದು ಸಹಕರಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಉದ್ಘೋಷ, ಎನ್ ಸಿಸಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಸಾಧನೆಗೈದ ಮೋಕ್ಷಿತ್ ಇವರಿಗೆ ಕರ್ನಾಟಕ ಸರಕಾರದಿಂದ ದೊರಕಿರುವ ಪ್ರೋತ್ಸಾಹ ಧನ 50000 ಪಡೆದ ವಿಚಾರವಾಗಿ ವಿಶೇಷವಾಗಿ ಪ್ರಶಂಸನೆಯನ್ನು ಗೈಯಲಾಯಿತು

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya
error: Content is protected !!