September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.

ಚರ್ಚ್ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳು, ಭಾಷಣ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮನಸೆಳೆದರು.

ಮುಖ್ಯ ಅತಿಥಿಗಳು ತಮ್ಮ ಭಾಷಣದಲ್ಲಿ ಭಾರತೀಯ ಸಂವಿಧಾನದ ಮಹತ್ವ ಮತ್ತು ದೇಶದ ಏಕತೆ–ಅಖಂಡತೆಯ ಕುರಿತು ಮಕ್ಕಳಿಗೆ ಸಂದೇಶ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ವಂ| ಫಾ ವಿಜಯ್ ಲೋಬೊ, ಚರ್ಚ್ ಪಾಲನ ಮಂಡಳಿಯ ಕಾರ್ಯದರ್ಶಿ ಮರ್ಲಿನ್ ಡಿಸೋಜ ಹಾಗೂ ಸ್ಥಳೀಯ ಪಂಚಾಯಿತಿ ಸದಸ್ಯರಾದ ಅನಿಲ್ ಡಿಸೋಜ ಹಾಗೂ ಜಾನೆಟ್ ರೋಡ್ರಿಗಸ್ ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಜೆಸಿಂತಾ ಸ್ವಾಗತಿಸಿ, ಶ್ರೀಮತಿ ನಳಿನಿ ಹಾಗೂ ಸಿಸ್ಟರ್ ಸಿರಿಶಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
error: Content is protected !!