September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಜಗತ್ತಿಗೆ ಸಂಸ್ಕೃತಿ, ಸಂಸ್ಕಾರ ಸೇರಿದಂತೆ ಎಲ್ಲವನ್ನು ನೀಡಿದ ದೇಶ ಭಾರತವಾಗಿದೆ. ಇಂದು ಪ್ರಪಂಚದ ಎಲ್ಲ ದೇಶಗಳಿಗೆ ಭಾರತದ ಪ್ರಾಮುಖ್ಯತೆ ತಿಳಿಯುವ ಮೂಲಕ ಅಖಂಡ ಭಾರತದ ಕನಸು ನನಸಾಗಿದೆ ಎಂದು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹೇಳಿದರು.

ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜಿನಲ್ಲಿ ಜ.26 ರಂದು ಜರಗಿದ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜವನ್ನು ಹಾರಿಸಿ ಬಳಿಕ ನಡೆದ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು.

ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ನೀಲಕಂಠ ಮಾತನಾಡಿ, ಭಾರತವು ಜನವರಿ 26, 1950 ರಂದು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು, ಬ್ರಿಟಿಷ್ ಕಾನೂನುಗಳನ್ನು ಬದಲಾಯಿಸಿ, ಸಾರ್ವಭೌಮ, ಪ್ರಜಾಪ್ರಭುತ್ವ, ಗಣರಾಜ್ಯ ರಾಷ್ಟ್ರವಾಗಿ ರೂಪುಗೊಂಡ ದಿನವಾಗಿದೆ. ಇದು ಸ್ವಾತಂತ್ಯ್ಯಕ್ಕಿಂತ ಭಿನ್ನವಾಗಿ, ದೇಶದ ಕಾನೂನು ಆಧಾರ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಾದ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯವನ್ನು ಎತ್ತಿ ತೋರಿಸುವಂತದಾಗಿದೆ. ನಾಗರಿಕರು ತಮ್ಮ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳಲು ಇದು ಪ್ರಮುಖ ದಿನವಾಗಿದೆ ಎಂದರು.

ವೇದಿಕೆಯಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕೋಶಾಧಿಕಾರಿ ಕಾಶಿನಾಥ್ ಭಟ್, ಟ್ರಸ್ಟಿ ರೇಷ್ಮಾ ಸುಭಾಶ್ಚಂದ್ರ ಶೆಟ್ಟಿ, ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ.ಆರ್., ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಥಮ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರತಿಜ್ಞಾ ನಿರೂಪಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya
error: Content is protected !!