September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ ” ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”ಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಹೆಣ್ಣು ಮಕ್ಕಳ ಶುಚಿತ್ವ, ಆರೋಗ್ಯ ಇಲಾಖೆಯ ಸೌಲಭ್ಯಗಳು, ಹೆಣ್ಣು ಮಕ್ಕಳಲ್ಲಿನ ಆರೋಗ್ಯ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಆರೋಗ್ಯ ಇಲಾಖೆಯ ಹಿರಿಯ ಸಹಾಯಕಿ ಶ್ರೀಮತಿ ವಿಜಯಲಕ್ಷ್ಮೀ ಇವರು ಸವಿವರವಾದ ಮಾಹಿತಿಯನ್ನು ನೀಡಿದರು. ಪೊಲೀಸ್ ಇಲಾಖೆಯಿಂದ ಪ್ರಮೋದಿನಿಯವರು, ಮಕ್ಕಳ ಹಕ್ಕುಗಳ ಬಗ್ಗೆ ಸಹಾಯವಾಣಿ ಹಾಗೂ ಪೋಕ್ಸೋ ಕಾಯ್ದೆ ಹೆಣ್ಣು ಮಕ್ಕಳಿಗಾಗುವ ಸಮಸ್ಯೆಗಳ ಬಗ್ಗೆ ತಿಳಿಸಿದರು.

ಕು. ದೀಪ ಜೊತೆಗಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಮಂಜುಳಾ ಸ್ವಾಗತಿಸಿದರೆ, ಶಿಕ್ಷಕಿ ಶ್ರೀಮತಿ ತ್ರಿವೇಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 76 ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರಾದ ಶ್ರೀಮತಿ ತ್ರಿವೇಣಿ , ಕು.ಶ್ವೇತಾ ಶ್ರೀಮತಿ ವಿಶಾಲಾಕ್ಷಿಯವರು ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು.

Related posts

ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’: ತುಳುನಾಡಿನ ಸಂಸ್ಕೃತಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ: ಅನಿಲ್ ಕುಮಾರ್:

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!