ಧರ್ಮಸ್ಥಳ: ಇಲ್ಲಿಯ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯದ ವಕ್ತಾರರಾದ ತುಮಕೂರಿನ ಎಚ್.ಎನ್. ಚಂದ್ರಶೇಖರ್ ರವರು “ಪ್ರತಿಯೊಬ್ಬ ಭಾರತೀಯನ ಮನಸ್ಥಿತಿ ಬದಲಾಗಬೇಕು. ಆಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಜಗನ್ನಾಥ್, ಶಾಂತಿವನದ ಮುಖ್ಯ ವೈದ್ಯಾಧಿಕಾರಿಡಾ. ಶಿವಪ್ರಸಾದ್ ಶೆಟ್ಟಿ, ಯೋಗ ಮತ್ತು ನೈತಿಕ ಶಿಕ್ಷಣದ ನಿರ್ದೇಶಕ ಡಾ. ಶಶಿಕಾಂತ್ ಜೈನ್, ವ್ಯವಸ್ಥಾಪಕರಾದ ಸ್ವಸ್ತಿಕ್, ವೈದ್ಯಾಧಿಕಾರಿಗಳು, ಶಾಂತಿವನದ ಸಾಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











