ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.
ಶಾಲಾ ಸಂಚಾಲಕರಾದ ವಂ|ಸ್ವಾ ಸ್ಟ್ಯಾನಿ ಗೋವಿಯಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು .ವಿದ್ಯಾರ್ಥಿಯಾದ ಯಶ್ವಿಜ್ ಶೆಟ್ಟಿ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಿಸಿದರು. ಎಲ್ಲಾ ಗಣ್ಯರು ಡಾ| ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮತ್ತು ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆಯನ್ನು ಮಾಡಿದರು. ನಂತರ ಎಲ್ಲರೂ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ವಿದ್ಯಾರ್ಥಿಗಳು ನೃತ್ಯದ ಮೂಲಕ ದೇಶಕ್ಕೆ ಗೌರವವನ್ನು ಸಲ್ಲಿಸಿದರು.

ಕಾರ್ಯಕ್ರಮಕ್ಕೆ ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಚೇತನ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವು ಇಂದು ಈ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಬಹಳ ಮುಖ್ಯವಾದ ಕಾರಣ ನಮ್ಮ ಸಂವಿಧಾನ. ಇಡೀ ವಿಶ್ವದಲ್ಲಿಯೇ ಭಾರತದ ಸಂವಿಧಾನವು ಲಿಖಿತ ಸಂವಿಧಾನವಾಗಿದೆ ಎಂದು ಹೇಳಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷ ವಂ|ಸ್ವಾ ಸ್ಟ್ಯಾನಿ ಗೋವಿಯಸ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಮಗೋಸ್ಕರ ದೇಶ ಏನನ್ನು ಕೊಡುತ್ತದೆಯೋ ಅದನ್ನು ಹೊರತು ನಾವು ದೇಶಕ್ಕೋಸ್ಕರ ಏನನ್ನು ಕೊಡುತ್ತೇವೆ ಎಂಬುದು ಬಹಳ ಮುಖ್ಯ ಎಂದು ಹೇಳಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ನೆಲ್ಸನ್ ಲಸ್ರಾದೋರವರು ಶಿಕ್ಷಕ-ರಕ್ಷಕ ಸಂಘದ ಸದಸ್ಯರು,ಶಿಕ್ಷಕ-ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪಲ್ಲವಿ ನಿರೂಪಿಸಿ, ಬುಶ್ರಾ ಫಾತಿಮಾ ಸ್ವಾಗತಿಸಿ, ಕತಿಜಾ ಸಮ್ರಾ ಧನ್ಯವಾದವನ್ನು ಸಮರ್ಪಿಸಿದರು.











