ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ 2024 ರ ಆರ್ಡಿಸಿ ಕ್ಯಾಂಪ್ ನಲ್ಲಿ ಭಾಗವಹಿಸಿದ್ದ ಉದಿತ್ ಕುಮಾರ್ ಯು.ವಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ, ಗುರಿ ತಲುಪುವ ಹಾದಿಗಳು, ಛಲದ ಮಹತ್ವ, ವಿದ್ಯಾರ್ಥಿ ಜೀವನದ ಸಾಧನೆಯ ಮಾರ್ಗಗಳು ಇತ್ಯಾದಿಗಳಿಂದ ದೇಶ ಸೇವೆಯವರೆಗಿನ ವಿಚಾರಗಳನ್ನು ವಿವಿಧ ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು. ಗಣರಾಜ್ಯೋತ್ಸವದ ಮಹತ್ವ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಭಾವನೆ ಮೂಡಿಸಲು ಮಾಡಬೇಕಾದ ಕೆಲಸಗಳು ಇತ್ಯಾದಿ ವಿಚಾರಗಳನ್ನು ಶಾಲಾ ಸಂಚಾಲಕರಾದ ಅನಂತಪದ್ಮನಾಭ ಭಟ್ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.











