September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಇಲ್ಲಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.25 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಆಲ್ಫಿಯ ದಂತವೈದ್ಯರು, ಡಾ.ಆಯಿಷಾ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಟ್ರಸ್ಟಿ ಸದಸ್ಯೆ ಮೇರಿ ಯು ಪಿ., ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿಯವರಾದ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya
error: Content is protected !!